ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ
ಬೆಳಗಾವಿ- ಇಟಗಿ – ಬೋಗೂರು ಗ್ರಾಮದ ಮದ್ಯದಲ್ಲಿರುವ ಹಳ್ಳಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಜನ ಕೃಷಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ನೀಡುವಂತೆ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿಯಾದ ಅಂಜಲಿ ನಿಂಬಾಳ್ಕರ್ ಮೃತ ಪಟ್ಟವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು ಬಡವರಾಗಿದ್ದಾರೆ, ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ನೀಡಬೇಕೆಂದು ಖಾನಾಪೂರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅಂಜಲಿ ನಿಂಬಾಳ್ಕರ್ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು ಕೂಡಲೇ ಪರಿಹಾರ ಘೋಷಿಸುವದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ