ಸವದತ್ತಿ :ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವದತ್ತಿ ಕುಮಾರೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಿರೇಹೊಳೆ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಜ್ಞಾನ ವಿಭಾಗ ಆಯ್ದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವೆ. ಐಎಎಸ್ ಅಧಿಕಾರಿಯಾಗುವ ಇಚ್ಛೆ ಇದೆ ಎಂದು ತಿಳಿಸಿದರು. ಶಾಲೆಯಿಂದ ಬಂದ ನಂತರ ರಾತ್ರಿ ಹನ್ನೆರಡರವರೆಗೂ ಓದುತ್ತಿದ್ದೆ. ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.
ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರ ತಂದೆ ಕಳೆದ ವರ್ಷವಷ್ಟೇ ನಿಧನರಾಗಿದ್ದರು. ತಾಯಿ ರಾಜಶ್ರೀ ಸವದತ್ತಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ