ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ ವಹಿವಾಟು ಸ್ಥಗಿತಗೊಂಡಿದ್ದು, ಖಾಸಗಿ ತರಕಾರಿ ಮಾರುಕಟ್ಟೆ ಬಂದ್ ಮಾಡಿ ಇಲ್ಲವಾದರೆ ನಮಗೆ ದಯಾಮರಣಕ್ಕೆ ಅನುಮತಿ ಕೊಡಿ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ಎಂದು ವಾದಿಸುತ್ತ ಬಂದಿರುವ ಎಪಿಎಂಸಿ ತರಕಾರಿ ಮಾರುಕಟ್ಟೆಯ ವ್ಯಾಪಾರಿಗಳು ಎಪಿಎಂಸಿ ಆವರಣದಲ್ಲಿ ಸುದೀರ್ಘ ಸತ್ಯಾಗ್ರಹ ಮಾಡಿ ಇವತ್ತು, ಜಿಲ್ಲಾಧಿಕಾರಗಳ ಕಚೇರಿಗೆ ಆಗಮಿಸಿ ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.