ಬೆಳಗಾವಿ- ಬೆಳಗಾವಿಯ ತ್ರೀಸ್ಟಾರ್ ಹೊಟೇಲ್ ನಲ್ಲಿ ನಡೆದ ಹೈ ಪವರ್ ಮೀಟೀಂಗ್ ನಲ್ಲಿ ರಾಯಬಾಗದ ಕಾಂಗ್ರೆಸ್ ಧುರೀಣ ಅಪ್ಪಾಸಾಹೇಬ್ ಕುಲಗೋಡೆ ಅವರು ಬೆಳಗಾವಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ನಿರ್ಣಯ ಹೊರಬಿದ್ದಿದೆ.ಸಭೆಯ ಬಳಿಕ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯವನ್ನು ಮಾದ್ಯಮಗಳಿಗೆ ತಿಳಿಸಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಚ್ಛರಿ ಹೆಸರು ಅಂತಿಮವಾಗಿದೆ.ನೂತನ ಅಧ್ಯಕ್ಷರಾಗಿ ರಾಯಭಾಗದ ಅಪ್ಪಾಸಾಹೇಬ್ ಕುಲಗೋಡೆ ಆಯ್ಕೆಯಾಗಿದ್ದಾರೆ.ಜಾರಕಿಹೊಳಿ ಬ್ರದರ್ಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆಯಾಗಿದೆ.
ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾಗಿದ್ದ ಅಪ್ಪಾಸಾಹೇಬ್ ಕುಲಗೋಡೆ,ರಾಯಬಾಗದ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಬಿಜೆಪಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದಾರೆ.ಶತಮಾನಗಳ ಇತಿಹಾಸ ಇರುವ ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ,ಇದೆ ಮೊದಲ ಬಾರಿಗೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕನಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ ಡವಳೇಶ್ವರ ಮುಂದುವರೆಯಲಿದ್ದಾರೆ.ಒಮ್ಮತದ ಅಭ್ಯರ್ಥಿ ಹೆಸರು ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ.