Breaking News
Home / Breaking News / ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್…

ದೆಹಲಿ, ಮಾರ್ಚ್‌ 21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಅರೆಸ್ಟ್‌ ಮಾಡಲಾಗಿದೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನ ಬಂಧಿಸಲಾಗಿದೆ.

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲ…!

ಚಿಕ್ಕೋಡಿ- ಚಿಕ್ಕೋಡಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಆಗಿದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ NCP ಅಭ್ಯರ್ಥಿ ಉತ್ತಮ್ …

Leave a Reply

Your email address will not be published. Required fields are marked *