ಬೆಳಗಾವಿ-ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಂತ್ರಿಗಳ ದಂಡು ಇಂದು ಬೆಳಗಾವಿಗೆ ಆಗಮಿಸುತ್ತಿದೆ.
ಅರುಣ್ ಸಿಂಗ್ ಸಚಿವರಾದ ಮಾಧುಸ್ವಾಮಿ,ಸುಧಾಕರ,ಮುನಿರತ್ನ ಸೇರಿದಂತೆ ಹಲವಾರು ಜನ ಬಿಜೆಪಿ ನಾಯಕರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ಧಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು ರಸ್ತೆಯ ಮೂಲಕ ಬೆಲ್ಲದ ಭಾಗೇವಾಡಿಗೆ ತೆರಳಿ ಉಮೇಶ್ ಕತ್ತಿ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು.ನಿನ್ನೆ ರಾತ್ರಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆದಿತ್ತು. ಇಂದು ಹಲವಾರು ಜನ ಸಚಿವರು,ಬಿಜೆಪಿ ನಾಯಕರು ಉಮೇಶ್ ಕತ್ತಿ ಅವರ ಮನೆಗೆ ಭೇಟಿ ನೀಡಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ