ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವರ್ಗಾವಣೆ

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಶುಭ ನಿಯೋಜನೆ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ನಗರಾಭಿವೃದ್ಧಿ ಕೋಶ ನಿರ್ದೇಶಕರಾಗಿದ್ದ ಶುಭ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅವರು ಮಹಾನಗರದ ಸ್ವಚ್ಛತೆ ವಿಚಾರದಲ್ಲಿ ಅತ್ಯಂತ ಆಸಕ್ತಿವಹಿಸಿ ಕಾರ್ಯನಿರ್ವಹಿಸಿದ್ದರು.

ಕನ್ನಡ ನಾಮಫಲಕ ಕಡ್ಡಾಯದ ವಿಚಾರದಲ್ಲೂ ಸರ್ಕಾರದ ಆದೇಶವನ್ನು ಅನುಷ್ಠಾನ ಮಾಡುವದರಲ್ಲಿ ಅಶೋಕ ದುಡುಗಂಟಿ ಅವರು ಕನ್ನಡದ ಸೇವಕನಂತೆ ಸೇವೆ ಮಾಡಿದ್ದರು.

ರಸ್ತೆ ನಿರ್ಮಾಣದ ಜಾಗೆಗೆ ಸಂಬಂಧಿಸಿದಂತೆ ಪರಿಹಾರ ಕೊಡುವ ವಿಚಾರದಲ್ಲಿ ಬೆಳಗಾವಿ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಮಾನ್ಯ ನ್ಯಾಯಾಲಯದ ಆದೇಶವನ್ನು ಪಾಲಿಸಿ ನ್ಯಾಯಾಧೀಶರಿಂದಲೂ ಅಶೋಕ ದುಡುಗುಂಟಿ ಅವರು ಒಳ್ಳೆಯ ಅಧಿಕಾರಿ ಎಂದು ಶಹಬ್ಬಾಶ್ ಗಿರಿ ಪಡೆದಿದ್ದರು.

ಕನ್ನಡ ರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿರುವಾಗ ಸರ್ಕಾರ ಅಶೋಕ ದುಡುಗುಂಟಿ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದು ದುರ್ದೈವದ ಸಂಗತಿಯಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *