ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಬೆಳಗಾವಿ ಎರಡನೇ ರಾಜ್ಯಧಾನಿಯಾಗಬೇಕು
ಈ ಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಶಾಸಕರು ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಧರಣಿ ನಡೆಸಿದೆ
ಉತ್ತರ ಕರ್ನಾಟಕ ವಿಕಾಸ ವೇದಿಕೆ ಸಂಚಾಲಕ ಅಶೋಕ ಪುಜಾರಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣಸೌಧ ಎದರು ಕಪ್ಪು ಮಾಸ್ಕ ಧರಿಸಿ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಧರಣಿ ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಮಾದ್ಯಮ ಜೊತೆ ಮಾತನಾಡಿದ ಅಶೋಕ ಪೂಜಾರಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಈ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳ ಬೇಕು ಕೂಡಲೇ ಬೆಳಗಾವಿಯನ್ನು ಎರಡನೇ ರಾಜ್ಯಧಾನಿ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈ ಕೊಳ್ಳಬೇಕು ಈ ಎಲ್ಲ ಬೇಡಿಕೆಯನ್ನು ಈ ಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕದ ಶಾಸಕರು ಒಕ್ಕಟ್ಟಾಗಿ ಒತ್ತಡ ಹೇರುವ ಕೆಲಸವನ್ನು ಪ್ರಸಕ್ತ ಅಧಿವೇಶನದಲ್ಲಿ ಮಾಡಬೇಕು ಎಂದು ಒತ್ತಾಯ .
ಅಧಿಕಾರಕ್ಕೆ ಬಂದ 24ಗಂಟೆಗಳ ಒಳಗಾಗಿ ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಾನಾಂತರ ಮಾಡುವ ವಾಗ್ದಾನ ಮಾಡಿದ್ದರು ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರು ಈ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ತುಟಿ ಬಿಚ್ಚುತ್ತಿಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.