ಬೆಳಗಾವಿ-ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೆಳಗಾವಿ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವಲ್ಲಿ ಕಿಂಚಿತ್ತೂ ಚಿಂತನೆ ಮಾಡುತ್ತಿಲ್ಲ,ಕೊಟ್ಟ ಭರವಸೆಯನ್ನು ಈಡೇರಿಸುತ್ತಿಲ್ಲ,ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಸಂಚಾಲಕ ಅಶೋಕ ಪೂಜಾರಿ ಅಸಮಾಧಾನ ವ್ಯೆಕ್ತಪಡಿಸಿದರು.
ಬೆಳಗಾವಿಯಲ್ಲಿ,ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಂಗಳೂರಿನಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ.ಈ ಅಧಿವೇಶನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ,ಮತ್ತು ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವ ಕುರಿತು ಉತ್ತರ ಕರ್ನಾಟಕದ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಲು ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಅಶೋಕ ಪೂಜಾರಿ ಒತ್ತಾಯಿಸಿದರು.
ಈ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಸೋಮವಾರ ದಿ 22 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಸಾಂಕೇತಿಕ ಧರಣಿ ಮಾಡುವದಾಗಿ ಅಶೋಕ ಪೂಜಾರಿ ಹೇಳಿದರು.