ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳ ಖತರ್ನಾಕ್ ಗ್ಯಾಂಗ್ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯ ನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆ ಸಂಪೂರ್ಣವಾಗಿ ವಿಫಲವಾಗಿದೆ. ನಗರದ ಪ್ರತಿಯೊಂದು ಗಲ್ಲಿ,ಗಲ್ಲಿಗಳಲ್ಲಿ ಬೀದಿ ನಾಯಿಗಳ ದೊಡ್ಡ ಪಡೆ ಇದೆ.ಬೀದಿ ನಾಯಿಗಳ ಸಂಖ್ಯೆ ವಿಪರೀತವಾಗಿದೆ. ಮಕ್ಕಳು ತಮ್ಮ ಮನೆಯ ಅಂಗಳದಲ್ಲಿ ಆಟ ಆಡಲು ಸಾಧ್ಯವೇ ಇಲ್ಲ. ಈ ರೀತಿಯ ಪರಿಸ್ಥಿತಿ ಎದುರಾದರೂ ಬೆಳಗಾವಿ ಮಹಾನಗರ ಪಾಲಿಕೆ ಈ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ