Breaking News

ಕಿತ್ತೂರು ಊತ್ಸವಕ್ಕೆ 200 ವರ್ಷ ನಾಳೆ ಬೆಂಗಳೂರಲ್ಲಿ ಮಹತ್ವದ ಸಭೆ…..

ಬೆಳಗಾವಿ – ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹೊತ್ತಿಸಿದ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಕಿತ್ತೂರು ಉತ್ಸಕ್ಕೆ ಈ ವರ್ಷ 200 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ,ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರ ಒತ್ತಡ,ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ನಾಳೆ ಸೋಮವಾರ, ಮಧ್ಯಾಹ್ನ 2-30 ಗಂಟೆಗೆ ಕಿತ್ತೂರು ಉತ್ಸವದ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮತ್ತು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಹಾಗು ಬೆಳಗಾವಿ ಜಿಲ್ಲೆಯ ಶಾಸಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ

ಈ ಬಾರಿಯ 200 ವರ್ಷದ ಕಿತ್ತೂರು ಉತ್ಸವ ರಾಷ್ಟ್ರಮಟ್ಟದ ಉತ್ಸವ ಆಗಬೇಕು ಎನ್ನುವದು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅವರ ಒತ್ತಾಯವಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಭೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಮಾಡಲಿದ್ದಾರೆ.

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *