ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆ ರಂಗೇರಿದೆ,ಮೂವರು ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಯ ಕುಸ್ತಿ ನಡೆದಿದೆ.
ಮಾಜಿ ಸಚಿವ KMF ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಠಿಖಾನಿ ಹೂಡಿದ್ದು ನಿನ್ನೆ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಜೊತೆ ಸಮಾಲೋಚನೆ ನಡೆಸಿದ್ರು,ಈ ಸಂಧರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಉಪಸ್ಥಿತರಿದ್ದರು.
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ನಿಟ್ಟಿನಲ್ಲಿ ಯಾವ,ಯಾವ ರೀತಿಯ ತಂತ್ರಗಳನ್ನು ಅನುಸರಿಸಬೇಕು ಎನ್ನುವದರ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾಂತೇಶ್ ಕವಟಗಿಮಠ ಅವರು ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿರುವ ವಿಷಯ ಈಗ ಎಲ್ಲರ ಗಮನ ಸೆಳೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ,ಚನ್ನರಾಜ್ ಹಟ್ಟಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಜೊತೆ ಪ್ರಚಾರ ನಡೆಸಿದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿರುವ ಲಖನ್ ಜಾರಕಿಹೊಳಿ ಅವರು ಬಿಜೆಪಿ,ಮತ್ತು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ್ದಾರೆ.