Breaking News
Home / Breaking News / ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಸಾಬೀತು

ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಸಾಬೀತು

ಬೆಳಗಾವಿ-ಅಂಕೋಲಾ ಉದ್ಯಮಿ,ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಮಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಸಾಬೀತಾಗಿದೆ.

ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತು ಆಗಿದ್ದು ಈ ಕುರಿತು ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ.ಏಪ್ರಿಲ್ 4ರಂದು ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ‌‌‌.ಎಂ.ಜೋಶಿ,*ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪ ನೀಡಿದ್ದಾರೆ. ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಆಗಿದ್ದಾರೆ.16ನೇ ಆರೋಪಿ ಉತ್ತರ ಕನ್ನಡದ ಆನಂದ ನಾಯಕ್ ದೋಷಮುಕ್ತರಾಗಿದ್ದಾರೆ.
ಉಳಿದಂತೆ 9 ಆರೋಪಿಗಳ ವಿರುದ್ಧದ ಆರೋಪ ಸಾಬೀತು ಆಗಿದೆ.

ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ,ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ,ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ,ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ,ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ,
ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿ ಎಂದು ತೀರ್ಪು ನೀಡಲಾಗಿದೆ.

2013 ಡಿಸೆಂಬರ್ 21 ರಂದು ಅಂಕೋಲಾದಲ್ಲಿ ಉದ್ಯಮಿ ಆರ್.ಎನ್. ನಾಯಕ ಹತ್ಯೆಯಾಗಿತ್ತು,
ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು,
ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ‌. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.
ಬನ್ನಂಜೆ ರಾಜಾ ಪರವಾಗಿ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *