ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಮೇ 7(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಕುಡಚಿಯ ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಇಂದು ಗುರುವಾರ ಒಂದು ಪಾಸಿಟೀವ್ ಕೇಸ್ ಪತ್ತೆಯಾಗಿ ಸೊಂಕಿತರ ಗುಂಪಿನಲ್ಲ ಸೇರ್ಪಡೆಯಾದ್ರೆ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ ಹೀಗಾಗಿ ಒಂದು ಇನ್ ಕಮೀಂಗ್ ಇಬ್ಬರು ಔಟ್ ಗೋಯಿಂಗ್….
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.
***
ಸಂತಸದ ಸುದ್ದಿ…
ಕೊರೊನಾ ಹಿನ್ನೆಲೆಯಲ್ಲಿ ಮೇ 5 ರಂದು ನಡೆಸಲಾಗಿದ್ದ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಎಲ್ಲ 37 ಜನರ ವರದಿ ನೆಗೆಟಿವ್ ಇದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ