Breaking News
Home / Breaking News / ಟಿಪ್ಪು ಜಯಂತಿ ಬೆಳಗಾವಿಯಲ್ಲಿ ಹೈ ಅಲರ್ಟ್..

ಟಿಪ್ಪು ಜಯಂತಿ ಬೆಳಗಾವಿಯಲ್ಲಿ ಹೈ ಅಲರ್ಟ್..

ಬೆಳಗಾವಿ- ಇಂದು ಟಿಪ್ಪು ಸುಲ್ತಾನ್ ಜಯಂತಿ ಹಿನ್ನಲೆಯಲ್ಲಿ

ರಾಜ್ಯ ಗುಪ್ತಚರ ಇಲಾಖೆ ಕೋಮು ಗಲಬೆ ನಡೆಯುವ ಸಾಧ್ಯತೆ ಇದೆ ಎಂದು ವರದಿ ನೀಡಿದ ಹಿನ್ನಲೆಯಲ್ಲಿ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ
ಟಿಪ್ಪು ಜಯಂತಿ ಕುರಿತು ಪರ ವಿರೋಧ ಅಲೆ ಕಾಣಿಸಿಕೊಂಡಿದ್ದು ಬೆಳಗಾವಿಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ

ರಾಜ್ಯ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದ್ದು ಜಯಂತಿ ಸಂಧರ್ಭದಲ್ಲಿ ರ್ಯಾಲಿ ಅಥವಾ ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ ಈ ಸಂಧರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೋಲೀಸ್ ಬಂದೋಬಸ್ತಿಯನ್ನು ನಿಯೋಜನೆ ಮಾಡಲಾಗಿದೆ

ಪೋಲೀಸರು ಕಿಡಗೇಡಿಗಳ ಮೇಲೆ ನಿಗಾ ವಹಿಸಿದ್ದು ನಗರದ ಅತೀ ಸೂಕ್ಷ್ಮ ನ ಪ್ರದೇಶಗಳಲ್ಲಿ ಹೆಚ್ಚಿನ ಪೋಲೀಸ್ ಬಂದೋಬಸ್ತಿ ಏರ್ಪಡಿಸಿದ್ದಾರೆ ಗಲಬೆ ಪೀಡಿತ ಪ್ರದೇಶಗಳಲ್ಲಿ ಸಿಸಿ ಟಿವ್ಹಿ ಕ್ಯಾಮರಾ ಅಳವಡಿಸಿರುವ ಪೋಲೀಸರು ಕಿಡಗೇಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ

ಟಿಪ್ಪು ಜಯಂತಿ ಅಂಗವಾಗಿ ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮ ಆಯೋಜಿಸಿದೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭಾಗವಹಿಸುತ್ತಿದ್ದಾರೆ

ಇಂದು ಶ್ರೀರಾಮ ಸೇನೆ ಬೆಳಗಾವಿಯ ಶಿವಾಜಿ ಉದ್ಯಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಅಫ್ಜಲ್ ನನ್ನು ಸಂಹಾರ ಮಾಡಿದ ಈ ದಿನವನ್ನು ವಿಜಯದ ದಿನ ಎಂದು ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವಿಜಯದ ದಿನ ಆಚರಿಸಲಿದೆ ಈ ಕಾರ್ಯಕ್ರಮ ಬೆಳಿಗ್ಗೆ 10-30 ಕ್ಕೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ
ನಗರ ಪೋಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ

About BGAdmin

Check Also

ವಿಟಿಯು ಅವ್ಯೆವಹಾರ..ಪ್ರೋಫೆಸರ್ ಯೋಗಾನಂದ ಅರೆಸ್ಟ್

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ (ವಿಟಿಯು)ಲ್ಯಾಬ್ ಸಾಧನ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಿ ಉಪನ್ಯಾಸಕ …

Leave a Reply

Your email address will not be published. Required fields are marked *