Breaking News

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ,ಸಚಿವ ಸೋಮಶೇಖರ್

ಬೆಳಗಾವಿ, – ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿರುವಂತೆ ಈಗಾಗಲೆ ೨೮ ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗಿದ್ದು, ಉಳಿದ ಆಶಾ ಕಾರ್ಯಕರ್ತೆಯರಿಗೆ ಒಂದು ವಾರದಲ್ಲಿ ಪ್ರೊತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುವುದು ಎಂದು ಸಹಕಾರ ಇಲಾಖೆಯ ಸಚಿವ ಎಸ್. ಟಿ ಸೋಮಶೇಖರ ಅವರು ತಿಳಿಸಿದರು.

ಸಹಕಾರ ಇಲಾಖೆ ಹಾಗೂ ಜೊಲ್ಲೆ ಉದ್ಯೋಗ ಸಮೂಹ, ಯಕ್ಸಂಬಾ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜು.೧೪) ಚಿಕ್ಕೋಡಿ ತಾಲೂಕಿನ ನನದಿ ಯಕ್ಸಂಬಾದಲ್ಲಿ ಆಯೋಜಿಸಿಲಾಗಿದ್ದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲಾಕ್ ಡೌನ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಘೋಷಣೆ ಮಾಡಿರುವಂತೆ ರೂ. ೧೨ ಕೋಟಿ ರೂಪಾಯಿಗಳನ್ನು ರಾಜ್ಯದ್ಯಾಂತ ಆಶಾ ಕಾರ್ಯಕರ್ತೆಯರಿಗೆ ತಲಾ ರೂ. ೩೦೦೦ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಕೋವಿಡ್-೧೯ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸೆ ಮಾಡಬೇಕು ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಡಿಸಿಸಿ ಬ್ಯಾಂಕ್ ನಿಂದ ೮ ಸಾವಿರ ಕೋಟಿ ರೂಪಾಯಿಗಳನ್ನು ರೈತರಿಗೆ ಸಾಲ ನೀಡಿದ್ದೇವೆ
ರೈತರಿಗೆ ಸಾಲ ತಲುಪುವ ವ್ಯವಸ್ಥೆಯನ್ನು ಪರಿಶೀಲನೆ ಮಾಡುತ್ತಿದ್ದೇವೆ. ರೈತರ ಅನೂಕೂಲಕ್ಕಾಗಿ ರೈತರಿಗೆ ಸಾಲ ನೀಡುವ ಯೋಜನೆಯನ್ನು ಅಗಸ್ಟ್ ೩೧ ರವರೆಗೆ ವಿಸ್ತರಿಸಲಾಗಿದ್ದು, ಇದರಿಂದ ರೂ ೪೦ ಕೋಟಿ ಸರ್ಕಾರಕ್ಕೆ ಹೊರೆ ಆಗಲಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕಡೆ ಹೆಚ್ಚಾಗಿ ಗಮನ ಹರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ, ವೈದ್ಯರು ಆಶಾ ಕಾರ್ಯಕರ್ತೆಯರು ಉತ್ತಮ ಕೆಲಸ ಮಾಡಿದ್ದಾರೆ. ಕೋವಿಡ್-೧೯ ನಿಯಂತ್ರಣ ಮಾಡಲು ಸರ್ಕಾರ ಹಗಲಿರಳು ಶ್ರಮಿಸುತ್ತಿದೆ ಎಂದು ಹೇಳಿದರು.

ಕೋವಿಡ್-೧೯ ರೋಗದಿಂದ ಸೋಂಕಿತರು ಹೆಚ್ಚಾಗಿ ಗುಣಮುಖ ಆಗುತ್ತಿದ್ದಾರೆ. ಕೋವಿಡ್-೧೯ ನಿಂದಾಗಿ ಭಯಪಡುವ ಅಗತ್ಯವಿಲ್ಲ ಆದರೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ಸಹಕಾರಿ ಸಂಸ್ಥೆಗಳಲ್ಲಿ ಸಹಕಾರ ಇದ್ದರೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಹಕಾರ ಕ್ಷೇತ್ರ ಬೆಳೆಯಲು ಸಾದ್ಯ. ಸಾಹಕಾರ ಕ್ಷೇತ್ರದಿಂದ ಆಶಾ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಲು ಚಿಂತನೆ ಮಾಡುತ್ತಿದ್ದೇವೆ.
ಮುಂದಿನ ದಿನಗಳಲ್ಲಿ ಸಹಕಾರ ಕ್ಷೇತ್ರದಿಂದ ಯಾವ ರೀತಿ ಹಣ ನೀಡಬೇಕು ಎಂಬುದನ್ನು ಚಿಂತನೆ ಮಾಡುತ್ತಿದ್ದೇವೆ ಎಂದು ಸಚಿವ ಎಸ್. ಟಿ ಸೋಮಶೇಖರ್ ಅವರು ಹೇಳಿದರು.

ಉಪ ಮುಖ್ಯಮಂತ್ರಿ ಲಕ್ಷ್ಮ ಸವದಿ ಅವರು ಮಾತನಾಡಿ, ಜೀವನದ ಹಂಗು ತೊರೆದು ಸಾಮಾಜಿಕ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಹಣ ನೀಡಿಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಹಣ ನೀಡುವುದು ಮಹತ್ವವಲ್ಲ ಅವರನ್ನು ಎಲ್ಲರಿಗೂ ಪರಿಚಯ ಮಾಡಿಕೊಡುವುದು ಮುಖ್ಯ ಎಂದು ಹೇಳಿದರು‌

ದಿನದಿಂದ ದಿನಕ್ಕೆ ಹರಡುತ್ತಿರುವ ರೋಗವನ್ನು ನಿಯಂತ್ರಣ ಮಾಡಲು ತನ್ನ ಮನೆಮಠ ಬಿಟ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ‌ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರಿ ಕ್ಷೇತ್ರದಿಂದ ಸಂಗ್ರಹಿಸಿದ ಸುಮಾರು ೧೫ ಕೋಟಿ ವೆಚ್ಚದಲ್ಲಿ ಆಶಾ ಕಾರ್ಯಕರ್ತೆಯರಿಗೆ ರೂ ೩,೦೦೦ ಪ್ರೋತ್ಸಾಹ ಧನ‌ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉಳಿದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದರು.

ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಿಗಮಠ ಅವರು ಮಾತನಾಡಿ, ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆ ಮಕ್ಕಳನ್ನು ಬಿಟ್ಟು ಸಮಾಜ ಸೇವೆ ಮಾಡುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾರ್ಹರು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೋವಿಡ್-೧೯ ನಿಂತ್ರಣಕ್ಕೆ ಹಗಲಿರಳು ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಗೌರವ ನೀಡಲು ಸರ್ಕಾರ ಘೋಷಣೆ ಮಾಡಿದಂತೆ ರೂ ೩,೦೦೦ ಪ್ರೋತ್ಸಾಹಧನದ ಚೆಕ್ ನೀಡುತ್ತಿರುವುದು ಸಂತೋಷ ಎನಿಸುತ್ತದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಪ್ರತಿ ಮನೆ ಮನೆಗೆ ಹೋಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಆಶಾ ಕಾರ್ಯಕರ್ತೆಯರು ಮೆಳೆ ಬಿಸಲು ಲೆಕ್ಕಿಸದೆ ಕೆಲಸ ಮಾಡಿದ್ದಾರೆ‌. ಕೋವಿಡ್-೧೯ ನಿಯಂತ್ರಣ ಮಾಡಲು ಎಲ್ಲರಕ್ಕಿಂತಲೂ ಹೆಚ್ಚಾಗಿ ಶ್ರಮಪಟ್ಟವರು ಆಶಾ ಕಾರ್ಯಕರ್ತೆಯರು.

ಆಶಾ ಕಾರ್ಯಕರ್ತೆಯರಿಗೆ ಸಿಗಬೇಕಾದ ಸಂಬಳ ದೊರಕಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ.ಆಶಾ ಕಾರ್ಯಕರ್ತೆಯರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಸರ್ಕಾರ ಸಿದ್ದವಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.

ಈ ವೇಳೆ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕ ಸಂಜಯ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು. ‌
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *