ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಘೋಷಣೆಯ ದಿನ ಗಣನೆ ಆರಂಭವಾಗಿದ್ದು ಬಿಜೆಪಿ ಸರ್ ಪ್ರೈಸ್ ಕ್ಯಾಂಡಿಡೇಟ್ ಘೋಷಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ಬಿಜೆಪಿ ಹೈಕಮಾಂಡ್,ಓರಿಜನಲ್ ಬಿಜೆಪಿ ಕ್ಯಾಂಡಿಡೇಟ್ ಗೆ ಟಿಕೆಟ್ ನೀಡಲು ನಿರ್ದರಿಸಿದೆ ಎಂದು ತಿಳಿದು ಬಂದಿದ್ದು,ಬಿಜೆಪಿ ಮರಾಠಾ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದು.ಈ ಬಾರಿ ಬೆಳಗಾವಿ ಕ್ಷೇತ್ರದಿಂದ ಮರಾಠಾ ಸಮಾಜದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಅಚ್ಚರಿ ಪಡಬೇಕಾಗಿಲ್ಲ.
ಮೊದಲಿನಿಂದಲೂ ಆರ್ ಎಸ್ ಎಸ್ ಸಂಘಟನೆಯಲ್ಲಿ ಸಕ್ರೀಯವಾಗಿರುವ ಕಿರಣ ಜಾಧವ ಮರಾಠಾ ಸಮಾಜದವರಾಗಿದ್ದು,ಬಿಜೆಪಿ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದು ಅವರೂ ಬಿಜೆಪಿ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ.
ಜನೇವರಿ 17 ರಂದು ಕೇಂದ್ರ ಗೃಹ ಸಚಿವ ಅಮೀತ ಶಾ ಬೆಳಗಾವಿಗೆ ಬರಲಿದ್ದು ಈ ಸಂಧರ್ಭದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಳಗಾವಿಯ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ.
ದಿವಂಗತ ಸುರೇಶ ಅಂಗಡಿ ಅಭಿಮಾನಿಗಳು,ಸುರೇಶ್ ಅಂಗಡಿ ಅವರ ಕುಟುಂಬದವರಿಗೆ ಟಿಕೆಟ್ ಕೊಡಬೇಕು ಎಂದು ಅಮೀತ ಶಾ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ .
ಭಾನುವಾರ ಅಮೀತ ಶಾ ಅವರು ಬೆಳಗಾವಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ,ಬಿಜೆಪಿ ಆಕಾಂಕ್ಷಿಗಳಲ್ಲಿ ಹಲ್ ಚಲ್ ಶುರುವಾಗಿದೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸಭೆ….
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತ್ರತ್ವದಲ್ಲಿ,ಬೆಳಗಾವಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಇಂದು ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ.
ಈ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಚಾರದಲ್ಲಿ ಬೆಳಗಾವಿ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಿ ಇಂದು ಅಂತಿಮವಾಗಿ ಹಲವು ಆಕಾಂಕ್ಷಿಗಳ ಹೆಸರನ್ನು ಫೈನಲ್ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಕಳುಹಿಸುವ ಸಾಧ್ಯತೆ ಇದೆ.
ಇಂದು ಫುಲ್ ಡೇ ಹುಬ್ಬಳ್ಳಿ ಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬೆಳಗಾವಿ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ ಈ ಸಭೆ ಇಂದು ರಾತ್ರಿಯವರೆಗೂ ನಡೆಯಲಿದೆ ಎಂದು ಗೊತ್ತಾಗಿದೆ…