ನಾಲೆಯಲ್ಲಿ ಯುವಕನ ನಾಪತ್ತೆ,SDRF ತಂಡದಿಂದ ಶೋಧ ಕಾರ್ಯಾಚರಣೆ.

ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ.

ಡುಮ್ಮ‌ಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ.

18 ವರ್ಷದ ನಾಗರಾಜ್ ಹೆಬ್ಬಳ್ಳಿ‌ ಬಳ್ಳಾರಿ ನಾಲಾದಲ್ಲಿ ಕೊಚ್ಚಿಕೊಂಡು ಹೋಗಿರುವ ಯುವಕನಾಗಿದ್ದು.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ

ಹೊಲದ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ನಾಗರಾಜ್ ಹೆಬ್ಬಳ್ಳಿ ನಾಪತ್ತೆಯಾಗಿದ್ದು.ಬಳ್ಳಾರಿ ನಾಲಾ ಬಳಿ ತೆರಳಿದಾಗ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದಾನೆಯುವಕನಿಗಾಗಿ ನಿನ್ನೆ ರಾತ್ರಿಯವರೆಗೂ ಶೋಧ ನಡೆಸಿದ್ದ ಎಸ್‌ಡಿಆರ್‌ಎಫ್ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.

ಎಸ್‌ಡಿಆರ್‌ಎಫ್ ತಂಡಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸಾಥ್ ನೀಡಿದ್ದು. ಯುವಕ ನಾಪತ್ತೆಯಾದ ಬಗ್ಗೆ ಅಂಕಲಗಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *