ಬೆಳಗಾವಿ, ಮೇ 5 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಒಟ್ಟು ಎಂಟು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಬಿಡುಗಡೆ ಹೊಂದಿದವರ ವಿವರ:
ಪಿ-224
ಪಿ-225
ಪಿ-243
ಪಿ-244
ಪಿ-245
ಪಿ-289
ಪಿ-294
ಪಿ-298
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.
***