Home / ಬೆಳಗಾವಿ ನಗರ / ನವ್ಹೆಂಬರ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ನವ್ಹೆಂಬರ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಳಗಾವಿ- ನವ್ಹೆಂಬರ ತಿಂಗಳ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿದಾನಸಭೆಯ ಸಚಿವಾಲಯದ ಮೂಲಗಳು ತಿಳಿಸಿವೆ
ನವ್ಹೆಂಬರ ನಾಲ್ಕು ಅಥವಾ ಆರರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದ್ದು ಮುಂಬರುವ ಸಚಿವÀ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿಯಾಲಿದೆ ಎಂದು ಹೇಳಲಾಗುತ್ತಿದೆ.
ಈ ಬಾರಿಯ ಅಧಿವೇಶನದಲ್ಲಿ ಕಬ್ಬಿನ ಬಾಕಿ ಬಿಲ್ ,ಕಾವೇರಿ ,ಮಹಾದಾಯಿ,ಕಳಸಾ ಬಂಡೂರಿ, ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ
ರಾಜ್ಯದಲ್ಲಿ ಈಗ ಕಾವೇರಿ ಕಾವು ಏರಿರುದರಿಂದ ಬೀಸುವ ದೊಣ್ಣೆಯಿಂದ ಪಾರಾಗಲು ಸಕಾರ ಬೆಳಗಾವಿಯಲ್ಲಿ ಅಧವೇಶನ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ
ಈ ಬಾರಿಯ ಚಳಿಗಾಲದ ಅಧಿವೇಶನ ಸರ್ಕಾರದ ಚಳಿ ಬಿಡಿಸುದಂತೂ ಗ್ಯಾರಂಟಿ ಆದರೆ ಉತ್ತರ ಕರ್ನಾಟಕದ ಶಾಸಕರು ಈ ಬಾರಿಯಾದರೂ ಒಗ್ಗಟ್ಟಾಗಿ ಪಕ್ಷಾತೀತವಾಗಿ ಉತ್ತರ ಕನಾಟಕದ ಸಮಸ್ಯೆಗಳ ಬಗ್ಗೆ ಹೋರಾಡುವದು ಅಗತ್ಯವಾಗಿದೆ.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *