Breaking News
Home / Breaking News / ಬೆಳಗಾವ್ಯಾಗ ಇಲೆಕ್ಷನ್ ತಯಾರಿ ಹೆಂಗ್ ನಡದೈತಿ ನೋಡ್ರಿ!!

ಬೆಳಗಾವ್ಯಾಗ ಇಲೆಕ್ಷನ್ ತಯಾರಿ ಹೆಂಗ್ ನಡದೈತಿ ನೋಡ್ರಿ!!

ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ , ಎಸ್.ಪಿ. ಭೇಟಿ: ಮೂಲಸೌಕರ್ಯ ಪರಿಶೀಲನೆ

ಬೆಳಗಾವಿ, -ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕನಿಷ್ಟ ಮೂಲಸೌಕರ್ಯವನ್ನು ಖಚಿತಪಡಿಸುವುದಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರಿಂದಿಗೆ ಬುಧವಾರ (ಮಾ.8) ವಿವಿಧ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿ, ಮೂಲಸೌಕರ್ಯ ಪರಿಶೀಲಿಸಿದರು.

ಯರಗಟ್ಟಿ, ಕೌಜಲಗಿ, ಮೂಡಲಗಿ, ಘಟಪ್ರಭಾ, ಶಿಂಧಿಕುರಬೇಟ, ಗೋಕಾಕ, ಬೆಲ್ಲದ ಬಾಗೇವಾಡಿ, ಉಳ್ಳಾಗಡ್ಡಿ ಖಾನಾಪುರ ಮತ್ತಿತರ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿದರು.

ಮತಗಟ್ಟೆಗಳಲ್ಲಿ ಇರುವ ಮೂಲಸೌಕರ್ಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿ ಜತೆ ಚರ್ಚೆ ನಡೆಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಪ್ರತಿಯೊಂದು ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಕರ್ಯವನ್ನು ಕಡ್ಡಾಯವಾಗಿ ಒದಗಿಸಬೇಕು.

ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಗಾಳಿ, ಬೆಳಕು ಇರುವಂತೆ ನೋಡಿಕೊಳ್ಳಬೇಕು. ಇದಲ್ಲದೇ ಕುಡಿಯುವ ನೀರು, ಶೌಚಾಲಯ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ವಿಕಲಚೇತನ ಮತದಾರರಿಗೆ ಅನುಕೂಲವಾಗುವಂತೆ ರ್ಯಾಂಪ್, ಗಾಲಿ ಕುರ್ಚಿ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ಭದ್ರತೆ ಮತ್ತು ಪೊಲೀಸ್ ಸಿಬ್ಬಂದಿ ನಿಯೋಜನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಪರಿಶೀಲಿಸಿದರು.
ಸ್ಥಳೀಯ ತಹಶೀಲ್ದಾರರು ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *