Breaking News

ಮಾ. 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಬೆಳಗಾವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ. ೨೦ ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಾ. ೧೬ ರಂದು ಬೆಳಗ್ಗೆ ೧೦ ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಪಕ್ಷದಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.

ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ೨೦೧೯ರ ಲೋಕಸಭಾ ಅಭ್ಯರ್ಥಿಗಳು, ೨೦೧೮ರ ವಿಧಾನಸಭಾ ಅಭ್ಯರ್ಥಿಗಳು, ಉಸ್ತುವಾರಿ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ೨೦೨೩ರ ವಿಧಾನಸಭಾ ಆಕಾಂಕ್ಷಿ ಅಭ್ಯರ್ಥಿಗಳು ಹಾಗೂ ಮುಂಚೂಣಿ ಘಟಕ, ವಿಭಾಗ, ಸೆಲ್‌ಗಳ ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *