Breaking News

ಚಿಕ್ಕೋಡಿಗೆ ಜಿಲ್ಲೆಗೆ 12 ನೇಯ ಸ್ಥಾನ ಮತ್ತು ಬೆಳಗಾವಿಗೆ ಈ ಸಲ 26 ನೇ ಸ್ಥಾನ..

SSLC ಫಲಿತಾಂಶ ಪ್ರಕಟ

ಬೆಂಗಳೂರು:
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಈ ಸಲ 26 ನೇ ಸ್ಥಾನ ಪಡೆದುಕೊಂಡಿವೆ.

ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 3,41,108 ಬಾಲಕರು, 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.
625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳು
ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಖಾಸಗಿ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಫೈ, ಚಿಕ್ಕಬಳ್ಳಾಪುರ ಶಾಲೆಯೊಂದರ ವಿದ್ಯಾರ್ಥಿ ಯಶಸ್ ಗೌಡ, ಸವದತ್ತಿಯ ಅನುಪಮ, ವಿಜಯಪುರದ ಭೀಮನ ಗೌಡ – ಈ ನಾಲ್ವರು 625ಕ್ಕೆ 625 ಅಂಕ ಗಳಿಸಿ ವಿದ್ಯಾರ್ಥಿಗಳುರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಚಿತ್ರದುರ್ಗ ಪ್ರಥಮ ಸ್ಥಾನ.. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ
ಜಿಲ್ಲಾವಾರು ಫಲಿತಾಂಶದಲ್ಲಿ ಶೇ.96.80 ಫಲಿತಾಂಶದೊಂದಿಗೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಶೇ.96.74ರಷ್ಟು ಫಲಿತಾಂಶ ಗಳಿಸಿ ಮಂಡ್ಯ ಎರಡನೇ ಸ್ಥಾನದಲ್ಲಿದೆ. ಹಾಸನ ಮೂರನೇ ಸ್ಥಾನ ಗಳಿಸಿದ್ದರೆ, ಶೇ.75.49 ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ಉತ್ತರ ಜೆಲ್ಲೆಗೆ 32ನೇ ಸ್ಥಾನ. ಬೆಂಗಳೂರು ದಕ್ಷಿಣ ಜಿಲ್ಲೆಗೆ 33ನೇ ಸ್ಥಾನ ಪಡೆದಿದೆ.
ಎಸ್‌ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23 ಹಾಗೂ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಎಂದು ತಿಳಿದು ಬಂದಿದೆ. ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್ಸೈಟ್ ಓಪನ್ ಮಾಡಬೇಕು
ನಂತರ ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಬೇಕು
• ನಂತರ ಫಲಿತಾಂಶವನ್ನು ಪರಿಶೀಲಿಸಿ ಮತ್ತು ರಿಸಲ್ಟ್ ಶೀಟ್ ಡೌನ್ಲೋಡ್ ಮಾಡಿಕೊಳ್ಳಬಹುದು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *