ಬೆಳಗಾವಿ: ಯುಪಿಎಸ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ಶೃತಿ ವಿಶೇಷ ಸಾಧನೆ ಮಾಡಿದ್ದಾಳೆ.ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಪ್ರಟಕಗೊಂಡಿದ್ದು, ಬೆಳಗಾವಿ ಜಿಲ್ಲೆಯ ಯುವತಿ ಶೃತಿ ಯರಗಟ್ಟಿ 362ನೇ ರ‌್ಯಾಂಕ್ ಪಡೆಯುವ ಮೂಲಕ ಕ್ರಾಂತಿಯ ನೆಲ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಐಎಎಸ್ ಪರೀಕ್ಷೆಯಲ್ಲಿ ಟಾಪರ್ ಆಗಿರುವ ಶೃತಿ,
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ನಿವಾಸಿಯಾಗಿದ್ದಾರೆ. ಶೃತಿ ಯರಗಟ್ಟಿ ಮೂಲತಃ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದವರು. ಶಿರಢಾಣ ಗ್ರಾಮದ ಡಾ.ಗಂಗಾಧರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿರುವ ಶೃತಿ, ಕೆಸಿಡಿ ಧಾರವಾಡದಲ್ಲಿ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದಾರೆ. ಬಿಎಸ್‌ಸಿ ವ್ಯಾಸಂಗ ಮಾಡಿ 7 ಚಿನ್ನದ ಪದಕ ಗಳಿಸಿದ್ದ ಶೃತಿ ಯರಗಟ್ಟಿ, ಈಗ ಆರನೇ ಬಾರಿ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 362ನೇ ರ‌್ಯಾಂಕ್ ಪಡೆಯುವ ಮೂಲಕ ತಮ್ಮ ಗುರಿ ಮುಟ್ಟಿದ್ದಾರೆ.
ನಿವೃತ್ತ ಶಿಕ್ಷಕ ಶಿವಾನಂದ ಯರಗಟ್ಟಿ, ಮಹಾನಂದಾ ದಂಪತಿ ಹಿರಿಯ ಪುತ್ರಿ ಶೃತಿ, ಸದ್ಯ ಬೆಂಗಳೂರಿನ ವಿಜಯನಗರದ ಪಿಜಿಯಲ್ಲಿ ವಾಸವಿದ್ದಾರೆ.ಮಗಳ ಸಾಧನೆಗೆ ತಂದೆ-ತಾಯಿ, ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.