ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ.
ಇಂದು ಪತ್ತೆಯಾಗಿರುವ ಇಬ್ಬರು ಸೊಂಕಿತರು ರಾಯಬಾಗ ಕುಡಚಿಯವರಾಗಿದ್ದು 10 ವರ್ಷದ ಬಾಲಕಿ ,ಮತ್ತು 15 ವರ್ಷದ ಯುವಕನಿಗೆ ಕೊರೋನಾ ಸೊಂಕು ತಗಲಿರುವದು ದೃಡವಾಗಿದೆ.
ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮೈನಸ್ ಆಗುತ್ತಲೇ ಇದೆ.ಆದ್ರೆ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಗೆ ಆಘಾತ ತಂದಿದೆ.
ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಪಾದರಾಯನಪೂರದ ಐವರಿಗೆ ಕೊರೋನಾ ಪಾಸಿಟೀವ್ ರಿಪೋರ್ಟ್ ಬಂದಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ: ಮತ್ತೇ ಇಬ್ಬರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 45 ಕ್ಕೆ ಏರಿಕೆ
ರಾಯಬಾಗ ತಾಲ್ಲೂಕಿನ ಈ ಹೊಸ ಎರಡು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 45 ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಏ.24) ಬೆಳಿಗ್ಗೆಯ ಪತ್ರಿಕಾ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 2 ಪ್ರಕರಣಗಳು ದೃಢಪಟ್ಟಿರುತ್ತವೆ.
ರಾಯಬಾಗ ತಾಲ್ಲೂಕಿನ 10 ವರ್ಷದ ಬಾಲಕಿ (ಪಿ-448) ಹಾಗೂ 15 ವರ್ಷದ ಬಾಲಕ (ಪಿ-463)ನಲ್ಲಿ ಸೋಂಕು ಪತ್ತೆಯಾಗಿರುತ್ತದೆ.
ಈ ಇಬ್ಬರು ಕ್ರಮವಾಗಿ ಪಿ-150 ಹಾಗೂ ಪಿ-148 ರ ಜತೆ ಸಂಪರ್ಕಕ್ಕೆ ಬಂದಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 45 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ ಮೂವರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
****