ಬೆಳಗಾವಿ-ಮತಾಂತರ ನಿಷೇಧ ಕಾಯ್ದೆಯ‌್ನು ರದ್ದುಗೊಳಿಸುತ್ತಿರುವದನ್ನು ಖಂಡಿಸಿ ಬೆಳಗಾವಿಯಲ್ಲಿ ವಿಶ್ವಹಿಂದೂ ಪರಿಷತ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸುತ್ತಿದ್ದ ಸ್ವಾಮಿಜಿಯೊಬ್ಬರ ಕಾರು ಕಾಕತಿ ಬಳಿ ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಾರು, ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದೆ, ಇಬ್ಬರು ಸಾವನ್ನೊಪ್ಪದ್ದಾರೆ-ಸ್ವಾಮೀಜಿಗೆ ಗಂಭೀರ ಗಾಯಗಳಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು,ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತಕ್ಕೀಡಾಗಿದೆ.ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಕಾರು,ಇದಾಗಿದೆ.ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.
ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ಗಂಭೀರ ಗಾಯಗಳಾಗಿವೆ.ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳು ಗಾಯಗೊಂಡಿದ್ದಾರೆ.ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ಭೀಕರ ರಸ್ತೆ ಅಪಘಾತದಲ್ಲಿಮೃತಪಟ್ಟಿದ್ದಾರೆಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.ಬೆಳಗಾವಿಯ ಜಿಲ್ಲಾಸ್ಪತ್ರೆಯ ಐಸಿಯುದಲ್ಲಿ ಕಾಡಸಿದ್ಧೇಶ್ವರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಸ್ವಾಮೀಜಿ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ಮೃತ ಸೇವಕರ ಹೆಸರು ಇನ್ನೂ ತಿಳಿದುಬಂದಿಲ್ಲ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ