ಬೆಳಗಾವಿ-ಹಿರೇಕೋಡಿಯ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಕುರಿತು ನಿನ್ನೆ ಮಧ್ಯಾಹ್ನ ದೂರು ದಾಖಲಾಗಿತ್ತು,ಆದ್ರೆ ರಾತ್ರಿ ಹೊತ್ತಿಗೆ ಮಹಾರಾಜರ ಹತ್ಯೆಯಾಗಿರುವ ವಿಚಾರ, ಪೋಲೀಸರ ತನಿಖೆಯಿಂದ ದೃಡವಾಗಿದೆ.
ನಂದಿ ಮಹಾರಾಜರ ಹತ್ಯೆಯಾಗಿರುವ ಬಗ್ಗೆ ಖಟಕಬಾವಿ ಗ್ರಾಮದಲ್ಲಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿದ್ದಾರೆ ಎಂದು ನಿನ್ನೆ ಭಕ್ತರು ದೂರು ನೀಡಿದ್ರು,ಭಕ್ತರು ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೇವು,ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ ತನಿಖೆ ನಡೆಸಿದಾಗ,ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರೆಂದು ವಿಚಾರಣೆ ನಡೆಸಿದಾಗ ಮಹಾರಾಜರ ಹತ್ಯೆಯಾಗಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹೇಳಿದ್ರು.
ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯ ವಿಚಾರಣೆಗೊಳಪಡಿಸಲಾಗಿತ್ತು.ಆಗ ಆತ ಆಶ್ರಮದಲ್ಲಿ ಕೊಲೆ ಮಾಡಿ ಬೇರೆಡೆ ಶವ ಬಿಸಾಕಿದ ಬಗ್ಗೆ ಮಾಹಿತಿ ನೀಡಿದ್ದ ,ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಓರ್ವನ ಸೇರಿ ಇಬ್ಬರನ್ನು ಬಂಧಿಸಿದ್ದೇವೆ.ಸ್ವಾಮೀಜಿ ಬಳಿ ಪಡೆದ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ಹಾಗೂ ಮಾಧ್ಯಮಗಳಿಗೆ ಮನವಿ ಮಾಡುತ್ತೇನೆಮೃತದೇಹ ಶೋಧಕಾರ್ಯ ಸ್ಥಳಕ್ಕೆ ಯಾರಿಗೂ ಪ್ರವೇಶವಿಲ್ಲ.ಸಾಕ್ಷ್ಯಾಧಾರ ಕಲೆಹಾಕಿ ನ್ಯಾಯಾಲಯಕ್ಕೆ ನೀಡಬೇಕಿರುವ ಹಿನ್ನೆಲೆ ಸದ್ಯಕ್ಕೆ ಕಾರ್ಯಾಚರಣೆ ಸ್ಥಳದಲ್ಲಿ ಯಾರಿಗೂ ಪ್ರವೇಶವಿಲ್ಲ.ಪ್ರಕರಣದ ತನಿಖೆ ಮುಂದುವರಿದಿದೆ.ಬೇರೆ ವ್ಯವಹಾರ ಏನಾದರೂ ಇತ್ತಾ ಎಂಬ ಬಗ್ಗೆಯೂ ತನಿಖೆ ಮಾಡಲಾಗುತ್ತಿದೆ.
ವೈಯಕ್ತಿಕ ಕಾರಣಕ್ಕೆ ಹತ್ಯೆ ನಡೆದಿದೆ.ಆರೋಪಿಗೆ ನೀಡಿದ ಹಣ ಸ್ವಾಮೀಜಿ ವಾಪಸ್ ಕೇಳಿದ್ದಕ್ಕೆ ಹತ್ಯೆಯಾಗಿದೆ.ಆರೋಪಿಗಳು ಹೇಳಿದ ಹಲವು ಪ್ರದೇಶಗಳಲ್ಲಿ ಶೋಧ ಮಾಡಿದ್ದೇವೆ ಎಂದ ಎಸ್‌ಪಿ ಹೇಳಿದ್ದಾರೆ.
ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ…
*ಖಟಕಬಾವಿ ಗ್ರಾಮದ ಗದ್ದೆಯಲ್ಲಿ ಜೈನಮುನಿ ಮೃತದೇಹಕ್ಕಾಗಿ ಪೋಲೀಸರು ನಿನ್ನೆ ಮದ್ಯರಾತ್ರಿಯಿಂದ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ಮೃತದೇಹವನ್ನು ತೆರೆದ ಕೊಳವೆಬಾವಿಯಲ್ಲಿ ಎಸೆದ ಬಗ್ಗೆ ಆರೋಪಿಗಳು ಬಾಯ್ಬಿಟ್ಟ ಹಿನ್ನೆಲೆಯಲ್ಲಿ
ಗದ್ದೆಯಲ್ಲಿ ಜೈನಮುನಿಗಳ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದಲ್ಲಿ ಗದ್ದೆಗೆ ತೆರಳುವ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಮಾರ್ಗವನ್ನು ಕ್ಲೋಸ್ ಮಾಡಲಾಗಿದೆ.
ಖಟಕಬಾವಿ – ಮುಗಳಕೋಡ ರಸ್ತೆ
ಬಂದ್ ಮಾಡಿ ಶೋಧಕಾರ್ಯ ನಡೆಯುತ್ತಿದೆ.ಶೋಧ ಕಾರ್ಯಾಚರಣೆ ಸ್ಥಳದಲ್ಲಿ ಸಾರ್ವಜನಿಕರು, ಮಾಧ್ಯಮಗಳಿಗೆ ನಿರ್ಬಂಧ ಮಾಡಲಾಗಿದೆ.ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಪರಿಸ್ಥಿತಿಯ ಮೇಲೆ ನಿರಂತರವಾಗಿ ನಿಗಾ ಇಟ್ಟಿದ್ದಾರೆ.