Breaking News

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಆರು ಜನ ಪಾಸಿಟೀವ್

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಆರು ಪಾಸಿಟೀವ್ ಪ್ರಕರಣಗಳು ಪತ್ತೆತಾಗಿವೆ ‌

ಈ ಆರು ಜನ ಹಿರೇಬಾಗೇವಾಡಿ ಗ್ರಾಮದವರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 50 ರ ಗಡಿ ದಾಟಿ 51 ಕ್ಕೇರಿದೆ

ಹಿರೇಬಾಗೇವಾಡಿಯಲ್ಲಿ ಪತ್ತೆಯಾದ ಆರು ಜನ ಈಗಾಗಲೇ ಡಿಸ್ಚಾರ್ಜ ಆಗಿರುವ ಪೇಶಂಟ್ ನಂ 128 ರ ದ್ವಿತೀಯ ಸಂಪರ್ಕಕ್ಕೆ ಬಂದವರು

ಹಿರೇಬಾಗೇವಾಡಿಯ 20 ವರ್ಷದ ಯುವಕ ಡಿಸ್ಚಾರ್ಜ್ ಆಗಿದ್ದು ಇತನ ಸಂಪರ್ಕಕ್ಕೆ ಬಂದವರು ಆರು ಜನ ಸೊಂಕಿತರು ಎಂದು ಇಂದು ಮದ್ಯಾಹ್ನ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ಙಲ್ಲಿ ದೃಡವಾಗಿದೆ.

ಬೆಳಗಾವಿ  ತಾಲೂಕಿನ ಹಿರೇಬಾಗೇವಾಡಿಯಲ್ಲಿ ಆರು ಜನರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಶನಿವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲಟೆನ್ ದಲ್ಲಿ ಆರು ಜನರಲ್ಲಿ ಸೋಂಕು ದೃಢಪಟ್ಟಿದ್ದು, ಇವರಲದಕಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಸೇರಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 51 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ ನಾಲ್ವರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

 

 

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *