Breaking News

ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ..

ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ

ಬೆಳಗಾವಿ, -ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.

ಅಂಗನವಾಡಿ ಕೇಂದ್ರಗಳಿಗೂ ರಜೆ:

ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೂ ಬುಧವಾರ (ಜು.26) ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
***

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.