Breaking News

ಬೆಳಗಾವಿ ಲೋಕಾಯುಕ್ತರಿಂದಲೂ, ಫೋನ್ ಇನ್, ಕಾರ್ಯಕ್ರಮ.

ಬೆಳಗಾವಿ: ಬೆಳಗಾವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪೋನ್ ಇನ್ ಕಾರ್ಯಕ್ರಮ ಆ.8ರಂದು ನಡೆಯಲಿದೆ.

ಸರಕಾರಿ ಕಚೇರಿಗಳಲ್ಲಿ ಸಾರ್ಜನಿಕ‌ ಕೆಲಸಗಳನ್ನು ಮಾಡಿಕೊಡಲು ಲಂಚಕ್ಕೆ ಬೇಡಿಕೆ, ಸರಕಾರಿ ನೌಕರನ ಕರ್ತವ್ಯ, ದುರ್ನಡತೆಗೆ ಸಂಬಂಧಿಸಿದ ಮಾಹಿತಿ,ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ನಿರ್ವಹಣೆ, ಇನ್ನಿತರ ಕುಂದುಕೊರತೆಗಳ ನಿವಾರಣೆಗಾಗಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಕರೆ ಮಾಡಿ ಮಾಹಿತಿ ತಿಳಿಸಬಹುದಾಗಿದೆ.

ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಅವರಿಗೆ ಕರೆ ಮಾಡಿ ಮಾತನಾಡಿ, ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಅಗಸ್ಟ್ 14ರಂದು 11 ರಿಂದ 12 ಗಂಟೆಯವರೆಗೆ ಮಾಹಿತಿ ನೀಡಬಹುದಾಗಿದೆ. ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ-0831-2950756.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *