Breaking News

ಬೆಳಗಾವಿಯಲ್ಲಿ 35 ಸಾವಿರ ರಾಷ್ಟ್ರ ಧ್ವಜಗಳ, ಹಂಚಿಕೆ..!!

ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ

ರಾಷ್ಟ್ರಧ್ವಜ ಎಲ್ಲರ ಮನೆಗಳ ಮೇಲೆ ಹಾರಾಡಲಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, : “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಸಾರ್ವಜನಿಕರೂ ಸ್ವಯಂಪ್ರೇರಿತರಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಧ್ವಜ ಶಿಷ್ಟಾಚಾರ ಪಾಲನೆ ಮಾಡಿ, ರಾಷ್ಟ್ರಧ್ವಜ ಹಾರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಗೆ ಒಟ್ಟಾರೆ 35 ಸಾವಿರ ರಾಷ್ಟ್ರ ಧ್ವಜಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿ ರಾಷ್ಟ್ರಧ್ವಜಕ್ಕೆ ರೂ.25.50 ದರ ನಿಗದಿಪಡಿಸಲಾಗಿದೆ. ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮನವಿ ಮಾಡಿದ್ದಾರೆ.
***

Check Also

ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂಈಎಸ್ ನಿಷೇಧದ ವಿಚಾರವೂ ಸೇರಲಿ- ಕರವೇ

ಬೆಳಗಾವಿ -ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಕುರಿತು ಚರ್ಚೆಗೆ …

Leave a Reply

Your email address will not be published. Required fields are marked *