ಬೆಳಗಾವಿ-ಬೆಳಗಾವಿ ದಕ್ಷಿಣ ವಿಭಾಗದ ಸಬ್ ರಿಜಿಸ್ಟರ್ ಕಚೇರಿಗೆ ಸರ್ಪೈಸ್ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಕಾರ್ಯ ಚಟುವಟಿಕೆಗಳನ್ನು ಪರಶೀಲನೆ ಮಾಡಿದ್ದಾರೆ.
ಬೆಳಗಾವಿಯ ದಕ್ಷಿಣ ಕ್ಷೇತ್ರದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಆಡಳಿತ ಮತ್ತು ಕಾರ್ಯವೈಖರಿಯ ಬಗ್ಗೆ,ಸಾರ್ವಜನಿಜರಿಂದ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಧಿಡೀರ್ ಭೇಟಿ ನೋಡಿ ಸಬ್ ರಜಿಸ್ಟರ್ ಅಧಿಕಾರಿಗಳ ನೀರೀಳಿಸಿದ್ದಾರೆ.
ಲೋಕಾಯುಕ್ತ ಬೆಳಗಾವಿ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಸರ್ಪೈಸ್ ಭೇಟಿ ನೀಡಿರುವ ಲೋಕಾಯುಕ್ತ ಅಧಿಕಾರಿಗಳು,ಬೇನಾಮಿ ಹೆಸರಲ್ಲಿ ಆಸ್ತಿ ಖರೀದಿಗೆ ಅವಕಾಶ ನೀಡದಂತೆ ನೋಂದಣಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೇನಾಮಿ ಹೆಸರಿನಲ್ಲಿ ಆಸ್ತಿ ಖರೀದಿಗೆ ಬಂದ್ರೆ ಅಂಥವರ ವಿರುದ್ಧ ದೂರು ದಾಖಲಿಸಲು ನಿರ್ದೇಶನ ನೀಡಿರುವ ಲೋಕಾಯುಕ್ತ ಅಧಿಕಾರಿಗಳು,ಮಾಲೀಕರ ನೈಜ ಮಾಹಿತಿ ಪರಿಶೀಲನೆ ಬಳಿಕವೇ ನೋಂದಣಿ ಮಾಡುವಂತೆ ಸೂಚನೆ ನೀಡಿದ್ದಾರೆ.
ಆನ್ಲೈನ್ ನೋಂದಣಿ ಪ್ರಕ್ರಿಯೆ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು,ಕೆಲಸದ ನಿಮಿತ್ಯ ಕಚೇರಿಗೆ ಬಂದಿದ್ದ ಸಾರ್ವಜನಿಕರ ಜೊತೆಗೂ ಲೋಕಾಯುಕ್ತ ಅಧಿಕಾರಿಗಳು ಮಾತನಾಡಿ ಸಬ್ ರಜಿಸ್ಟರ್ ಕಚೇರಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.