Breaking News

ಟ್ರಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು.

ಬೆಳಗಾವಿ-ನಿಂತಿದ್ದ ಟ್ರಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಪಸಿಕ್ರಾಸ್-ಕಪರಟ್ಟಿ ಕ್ರಾಸ್ ಬಳಿ ನಡೆದಿದೆ.

ಗೋಕಾಕ ತಾಲೂಕಿನ ತಳಕಟನಾಳ ಗ್ರಾಮದ ಬಸವರಾಜ ಬಡಿಗೇರ(31) ಮೃತ ದುರ್ದೈವಿಯಾಗಿದ್ದಾನೆಗೋಕಾಕದಿಂದ ತಳಕಟನಾಳ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ತಲೆಗೆ ಗಂಭೀರ ಗಾಯವಾಗಿ ಬಸವರಾಜ ಬಡಿಗೇರ ಸ್ಥಳದಲ್ಲೇ ಸಾವನ್ನೊಪ್ಪಿದ್ದಾನೆ.ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *