Breaking News
Home / Breaking News / ಬೆಳಗಾವಿ ವಿಮಾನ ನಿಲ್ಧಾಣದಲ್ಲಿ ಹೊಸ ಟರ್ಮಿನಲ್…!!

ಬೆಳಗಾವಿ ವಿಮಾನ ನಿಲ್ಧಾಣದಲ್ಲಿ ಹೊಸ ಟರ್ಮಿನಲ್…!!

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 357 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ 2026 ರೊಳಗೆ ನಿರ್ಮಾಣವಾಗಲಿದೆ ಎಂದು ಸಂಸದೆ ಮಂಗಲಾ ಅಂಗಡಿ ಮತ್ತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಶನಿವಾರ ಡಿ-2 ರಂದು ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಂಸದೆ ಮಂಗಲಾ ಅಂಗಡಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಭೆ ನಡೆಸಿ, ಸಂಪೂರ್ಣ ಯೋಜನೆಯ ರೂಪರೇಶಗಳ ಬಗ್ಗೆ ಚರ್ಚಿಸಿದರು.

ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ 4 ಏರೋ ಬ್ರಿಡ್ಜ್, 8 ಏಕ್ಸಲೇಟರ್, 8 ಲಿಪ್ಟ್, ಏಕಕಾಲಕ್ಕೆ ಹೊರ ಹೊಗುವ ಮತ್ತು ಒಳಬರುವ 2400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಏಕಕಾಲಕ್ಕೆ 9 ವಿಮಾನಗಳ ನಿಲುಗಡೆ ವ್ಯವಸ್ಥೆ ಹೊಂದಿದ್ದು, ಟರ್ಮಿನಲ್ ಎದುರಿಗೆ 500 ಕಾರ್, 200 ಬೈಕ್, 10 ಬಸ್ ಹಾಗೂ ಇನ್ನಿತರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ. ಮುಂದಿನ ದಿನಗಳಲ್ಲಿ ಅತ್ಯಾಧುನಿಕವಾದ ಸೌಲಭ್ಯಗಳ ಮೂಲಕ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು

ಈಗಾಗಲೇ ದೆಹಲಿ, ಮುಂಬೈ ಸೇರಿದಂತೆ ದೇಶದ ಅನೇಕ ನಗರಗಳಿಗೆ ಬೆಳಗಾವಿಯಿಂದ ನೇರ ಸಂಪರ್ಕ ವಿಮಾನಗಳು ಹಾರಾಡುತ್ತಿವೆ. ಇನ್ನೂ ಹೆಚ್ಚಿನ ವಿಮಾನ ಸೇವೆ ಸಿಗಲಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ. ಉತ್ತಮ ಗುಣಮಟ್ಟದ ವಿಮಾನ ಸೇವೆ ನೀಡಲು ಸಹ ಇದು ಸಹಕಾರಿಯಾಗಲಿದೆ.

ಈ ಸಂದರ್ಭದಲ್ಲಿ ಲೋಕಸಭಾ ಸಂಸದೆ ಮಂಗಲಾ ಅಂಗಡಿ, ವಿಮಾನ ನಿಲ್ದಾಣ ನಿರ್ದೇಶಕ ಎಸ್ ತ್ಯಾಗರಾಜನ್ ಸಲಹಾ ಸಮಿತಿ ಸದಸ್ಯರಾದ ಭರತ ದೇಶಪಾಂಡೆ, ಸಂಜಯ ಭಂಡಾರಿ, ಆಯ್.ಜಿ ದೇಯಣ್ಣವರ, ಗುರುದೇವ ಪಾಟೀಲ್, ಪ್ರಿಯಾಂಕಾ ಅಜ್ರೇಕರ್, ಅನುಪ್ ಕಾಟೆ, ಸೇರಿದಂತೆ ಜಿಲ್ಲೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *