ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಮೂವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ ನೀಡಿದ ನ್ಯಾಯಾಲಯ,ಬೆಳಗಾವಿ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಮೂರು ದಿನಗಳ ಕಾಲ ಆರೋಪಿಗಳು ಸಿಐಡಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ.
ಪ್ರಕರಣದ ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ,ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಸಿಐಡಿ ಕಸ್ಟಡಿಯಲ್ಲಿದ್ದು,ಬೆಳಗಾವಿಯ ಅಜ್ಞಾತ ಸ್ಥಳದಲ್ಲಿ ಆರೋಪಿಗಳಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ