ಬೆಳಗಾವಿ ಬೆಳಗಾವಿಯ ಬಸವೇಶ್ವರ ವೃತ್ತದ ಬಳಿ ಇರುವ ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಕಂದಾಯ ಶಾಖೆಯಲ್ಲಿ ಕಳ್ಳತನ ನಡೆದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಪಾಲಿಕೆಯ ಕಚೇರಿಯ ಕಿಡಿಕಿ ಗಾಜು ಒಡೆದು, ಬಾಗಿಲು ಮುರಿದು ಒಳಗೆ ನುಗ್ಗಿ ಲ್ಯಾಪ್‌ಟಾಪ್ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ಆಸ್ತಿ ಮಾಲೀಕತ್ವದ ದಾಖಲಾತಿ, ಆಸ್ತಿ ಮಾಲೀಕರ ಗುರುತಿನ ಚೀಟಿ, ತೆರಿಗೆ ಚೀಟಿ, ಕಟ್ಟಡ ಪರವಾನಗಿ ಪತ್ರ ಸೇರಿದಂತೆ ಒಟ್ಟು 26 ವಾರ್ಡ್‌ಗಳ ನಿವಾಸಿಗಳ ದಾಖಲೆಗಳ ಸಂಗ್ರಹವಿದ್ದ ನಾಲ್ಕು ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ.
ಸೋಮವಾರ ಬೆಳಗ್ಗೆ ಸಿಬ್ಬಂದಿ ಕಚೇರಿಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಟಿಳಕವಾಡಿ ಠಾಣೆ ಪೊಲೀಸರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದರು.ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				
		
						
					
						
					
						
					