ಬೆಳಗಾವಿ :ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಖಾಸಗಿ ಬಸ್ ಪಲ್ಟಿಯಾಗಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಹೈದರಾಬಾದ್‌ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಗಂಗಾವತಿ ಮತ್ತು ಕೊಪ್ಪಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ಬೆಳಗ್ಗೆ 7:00 ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಹಲವರಿಗೆ ತೀವ್ರ ಗಾಯಗಳಾಗಿವೆ, ಕೆಲವರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ