ಬೆಳಗಾವಿ- ಬೆಳಗಾವಿ ಲೋಕಸಭಾ ಅಖಾಡಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿ ಹೊಡೆದಿದ್ದಾರೆ.ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಜೊತೆ ಎರಡು ಗಂಟೆಗೂ ಹೆಚ್ವು ಕಾಲ ಚರ್ಚಿಸಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಸಮಾಲೋಚನೆ ಮಾಡಿದ್ದಾರೆ.ಗುರುವಾರ ಮಧ್ಯಾಹ್ನ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಲೆ,ಇದೆ,ಕಾರ್ಯಕರ್ತರು ಉತ್ಸುಕರಾಗಿದ್ದಾರೆ.ಎಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತಾರೆ.ಎಲ್ಲರಲ್ಲಿಯೂ ಸಹಮತ ಇದೆ.ನರೇಂದ್ರ ಮೋದಿ ಅವರು ಈ ಬಾರಿಯೂ ಪ್ರಧಾನಿಯಾಗೋದು ನಿಶ್ಚಿತವಾಗಿದೆ ಬೆಳಗಾವಿಯಲ್ಲೂ ಬಿಜೆಪಿಯ ವಿಜಯದ ಪತಾಕೆ ಹಾರುತ್ತದೆ.ನಾವೆಲ್ಲರೂ ಅದಕ್ಕಾಗಿ ಹಗಲಿರುಳು ಶ್ರಮಿಸುತ್ತೇವೆ ಎಂದು ರಮೇಶ್ ಜಾರಕಿಹೊಳಿ ಅವರು ಜಗದೀಶ್ ಶೆಟ್ಟರ್ ಅವರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರದಿಂದ ನಿರಂತರವಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಸಂಚಾರ ಮಾಡುತ್ತೇನೆ.ಬಿಜೆಪಿಯ ಕಾರ್ಯಕರ್ತರನ್ನು,ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಯ ಮೇಲೆ ನಿಗಾ ಇಡುವದಾಗಿ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರಿಗೆ ಮಾತು ಕೊಟ್ಟಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.ರಮೇಶ್ ಜಾರಕಿಹೊಳಿ ಅವರು ಇದೇ ಸಂಧರ್ಬದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸತ್ಕರಿಸಿ ಅಭಿನಂದಿಸಿಸಿದರು
ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ,ಬಿಜೆಪಿ ಮುಖಂಡ ಕಿರಣ ಜಾಧವ,ಮುರುಘೇಂದ್ರಗೌಡ ಪಾಟೀಲ ಕಣಬರ್ಗಿ,ಹಾಗೂ ಇತರ ನಾಯಕರು ಉಪಸ್ಥಿತರಿದ್ದರು