ಬೆಳಗಾವಿ: ನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಕಂಪನಿಯ ನೌಕರರನ್ನು ತಡೆದು ಲೂಟಿ ಮಾಡುತ್ತಿದ್ದ ಲೂಟಿಕೋರರನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೋಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ.
ನಗರದಲ್ಲಿ ಮತ್ತೆ ಬಾಲಬಿಚ್ಚಿರುವ ಕಳ್ಳರನ್ನು ಮಂಗಳವಾರ ರಾತ್ರಿ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೇಂದ್ರ ಬಸ್ ನಿಲ್ದಾಣದಿಂದ ಖಾಸಗಿ ಕಂಪನಿಯ ನೌಕರನೊಬ್ಬನು ಬಾಜಿ ಮಾರ್ಕೆಟರ್ ರಸ್ತೆಯ ಮೂಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬೈಕ್ ಮೇಲೆ ಬಂದ ಕಳ್ಳರ ಅಡ್ಡಗಟ್ಟಿ ಮೊಬೈಲ್, ಇನ್ನಿತರ ವಸ್ತುಗಳನ್ನು ಕಸಿದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.
ಈ ವೇಳೆ ಜತೆಯಲ್ಲಿ ಇನ್ನಿಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದಿದ್ದಾರೆ.