ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ.
ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ ಕಾರ್ಮಿಕ. ಗ್ರಾಮದಲ್ಲಿ ನರೇಗಾ ಯೋಜನೆಯ ಹಳ್ಳ ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿ ಮಾಡುತ್ತಿದ್ದರು. ಆಗ ತೀವ್ರ ಹೃದಯಾಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಪಿಡಿಒ ವಿಜಯಲಕ್ಷೀ ಆನಿಗೋಳ, ಗ್ರಾಮ ಪಂಚಾಯಿ ಸದಸ್ಯರು ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಸರ್ಕಾರದಿಂದ ಬರುವ ಸಹಾಯಧನ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು. ಮೃತ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು.