ಬೆಳಗಾವಿ-ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಿಸಲಾಗಿದೆ
ಸಿಎಂ ಆಗಮನ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿರ್ಗಮನ ಹಿನ್ನೆಲೆಯಲ್ಲಿಸಿಎಂ ವಿಶೇಷ ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ.ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಸಿಎಂ ವಿಶೇಷ ವಿಮಾನಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಲ್ಯಾಂಡಿಂಗ್ ಆಗಲು ಅನುಮತಿ ಸಿಕ್ಕಿಲ್ಲ.
11.45ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶಿರಸಿಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ,ಈ ಕಾರಣಕ್ಕೆ ಸಿಎಂ ಸಿದ್ರಾಮಯ್ಯ ವಿಶೇಷ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನಿರಾಕರಣೆ ಮಾಡಲಾಗಿದೆ.ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿರುವ ಸಿಎಂ ಸಿದ್ರಾಮಯ್ಯ.
ಮಧ್ಯಾಹ್ನ 12ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ.ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ತೆರಳಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ