ಬೆಳಗಗಾವಿ, ಏ.: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರು ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ನ್ನು ಮಂಗಳವಾರ (ಏ.28) ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು.
ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕರಾದ ಡಾ.ಅಪ್ಪಾಸಾಹೇಬ್ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ.ಮುನ್ಯಾಳ, ಸಹಾಯಕ ಆಡಳಿತ ಅಧಿಕಾರಿ ರಮೇಶ ಮಡಿವಾಳ ಉಪಸ್ಥಿತರಿದ್ದರು.
ಕೋವಿಡ್-19 ನಿಯಂತ್ರಣಕ್ಕಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರನ್ನು ಇಲಾಖೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ