ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ

ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯ ತಮ್ಮ ಭಾಷಣದಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ ವಿಷಯವನ್ನು ಪ್ರಸ್ತಾವಣೆ ಮಾಡಿರುವದರ ಕುರಿತು ಹಾಗೂ ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ ಕಟ್ ಎಂದು ಮತದಾರರಿಗೆ ಬೆದರಿಕೆ ಹಾಕುವ ಕುರಿತು ವಿವಿಧ ಸುದ್ಧಿ ವಾಹಿನಿಗಳಲ್ಲಿ ಬಿತ್ತರವಾಗಿರುತ್ತದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಭAಧಿಸಿದAತೆ ಕಾಗವಾಡ ವಿಧಾನ ಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಂದ ಇಪ್ಪತ್ತನಾಲ್ಕು ಗಂಟೆಯೊಳಗಾಗಿ ವಿವರಣೆ ನೀಡುವಂತೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿರುತ್ತದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Check Also

ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ವರ್ಗಾವಣೆ

ಬೆಳಗಾವಿ -ಕಳೆದ ಎರಡು ವರ್ಷಗಳಿಂದ ಬೆಳಗಾವಿ ಡಿಸಿಪಿ ( ಕಾ.ಸೂ) ಯಾಗಿ ಕರ್ತವ್ಯ ನಿಭಾಯಿಸಿದ ರೋಹನ್ ಜಗದೀಶ್ ಅವರ ವರ್ಗಾವಣೆಯಾಗಿದ್ದು …

Leave a Reply

Your email address will not be published. Required fields are marked *