ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ ಗ್ರಾಮದ ಜನ.ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗ್ರಾಮಸ್ಥರು.ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿಯಾಗಿಕೂಡಲೇ ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳುತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಯಾವುದೇ ರೀತಿಯ ಅನಾಹುತ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡ್ತಿರುವ ತಾಲೂಕಾ ವೈದ್ಯರುಗ್ರಾಮಸ್ಥರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರಿಗೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ.
ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಚೆಕ್ ಮಾಡಲಾಗುತ್ತಿದೆ.ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಆರೋಗ್ಯ ಅಧಿಕಾರಿಗಳು.
ಮಾಹಿತಿ ಸಿಗುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸವದತ್ತಿ ಮತಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ.
ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆನೀಡಿದ್ದಾರೆ