ಯುಜಿಸಿ-ನೆಟ್’ ಪರೀಕ್ಷೆ ರದ್ದು, ಕೇಂದ್ರ ಸರ್ಕಾರದ ಆದೇಶ

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೂನ್ 18 ರಂದು ದೇಶದ ವಿವಿಧ ನಗರಗಳಲ್ಲಿ ನಡೆಸಿದ ‘ಯುಜಿಸಿ-ನೆಟ್’ 2024 ಪರೀಕ್ಷೆಯನ್ನು ರದ್ದುಗೊಳಿಸಿದೆ.

ಗೃಹ ಸಚಿವಾಲಯದ ಭಾರತೀಯ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್‌ನ (I4ಸಿ) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್‌ನಿಂದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಜೂನ್ 19 ರಂದು ಪಡೆದ ಮಾಹಿತಿಯಲ್ಲಿ ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪವಿತ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ UGC-NET ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ಹೊಸದಾಗಿ ಪರೀಕ್ಷೆಯನ್ನು ನಡೆಸಲಾಗುವುದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವೇಳೆ ಈ ವಿಚಾರದ ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗುತ್ತಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *