ಬೆಳಗಾವಿ- ಮೆಡಿಕಲ್ ಪದವಿ ಇಲ್ಲದೇ, ಆಸ್ಪತ್ರೆಯ ಪರವಾನಿಗೆ ಇಲ್ಲದೇ ಚಿಕಿತ್ಸೆ ನೀಡುತ್ತಿದ್ದ ಡಾಕ್ಟರ್ ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಶಿಸ್ತಿನ ಕ್ರಮ ಜರುಗಿಸಿ ಶಿಕ್ಷೆ ವಿಧಿಸಿದ್ದಾರೆ.
ನಕಲಿ ವೈದ್ಯನಿಗೆ ಒಂದು ವಾರ ಜೈಲು ಶಿಕ್ಷೆ ಹಾಗೂ ಲಕ್ಷ ರೂಪಾಯಿ ದಂಡ ವಿಧಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.ಚಿಕ್ಕೋಡಿ ತಾಲೂಕಿನ ಕೇರೂರ್ ಗ್ರಾಮದ ಮುಲ್ಲಾ ಕ್ಲಿನಿಕ್ ನ ರಿಯಾಜ್ ಮುಲ್ಲಾಗೆ ಶಿಕ್ಷೆ ವಿಧಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಯಲು ಆರೋಗ್ಯಾಧಿಕಾರಿಗಳು ಅಲ್ಲಲ್ಲಿ ದಾಳಿ ಮಾಡುವ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ