Breaking News

ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು.

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ

ಬೆಳಗಾವಿ, ): ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವ ನಿತೇಶ್ ಪಾಟೀಲ ಅವರನ್ನು ಶುಕ್ರವಾರ (ಜು.05) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ, ಜಿಲ್ಲಾಮಟ್ಟದ ಅಧಿಕಾರಿಗಳು ಸನ್ಮಾನಿಸಿ, ಬೀಳ್ಕೊಟ್ಟರು.

ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿತೇಶ್ ಪಾಟೀಲ ಅವರು, ಯಾವುದೇ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ನೇಹದಿಂದ ಕಾಣಬೇಕು. ಜತೆಗೆ ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು. ಎರಡೂವರೆ ವರ್ಷದಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದು ಸಂತಸ ತಂದಿದೆ ಎಂದರು.

ಆರ್.ಸಿ.ಯು. ರಿಜಿಸ್ಟರ್ ರಾಜಶ್ರೀ ಜೈನಾಪುರ ಮಾತನಾಡಿ ನಿತೇಶ್ ಪಾಟೀಲ್ ಅವರ ಕಾರ್ಯ ದಕ್ಷತೆಗೆ ಇಡೀ ಜಿಲ್ಲೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ. ಆಡಳಿತ ವರ್ಗವನ್ನು ಸುಧಾರಣೆಗೆ ತರುವುದು ಮಾತ್ರವಲ್ಲದೆ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಿದ ಜನಪರ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ಇಲಾಖೆಯ ಯಾವುದೇ ಸಣ್ಣ ಕಾರ್ಯಕ್ರಮವು ಯಶಸ್ವಿಯಾಗಬೇಕೆಂದರೆ ಅವರ ಪರಿಪೂರ್ಣ ಸಹಭಾಗಿತ್ವ ಬಹಳಷ್ಟಿದೆ. ಕಿತ್ತೂರು ಉತ್ಸವ, ಬೆಳವಡಿ ಮಲ್ಲಮ್ಮ ಉತ್ಸವ, ಗಣೇಶ ಹಬ್ಬ ಸೇರಿದಂತೆ ಪ್ರತಿಯೊಂದು ಕಾರ್ಯಕ್ರದ ಯಶಸ್ವಿಗೆ ಅವರು ನಿರಂತರ ಶ್ರಮಿಸಿದ್ದಾರೆ.

ನಿತೇಶ್ ಪಾಟೀಲ ಅವರ ಅಧಿಕಾರವಧಿಯಲ್ಲಿ ನಡೆದ
ಚಳಿಗಾಲದ ಅಧಿವಶನದಲ್ಲಿ ಅವರ ಕಾರ್ಯವೈಖರಿಯನ್ನು ಇಡೀ ರಾಜ್ಯ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಎಲ್ಲ ಇಲಾಖೆಗಳಗೆ ಅವರು ವಹಿಸಿಕೊಟ್ಟ ಜವಾಬ್ದಾರಿಗಳಿಂದ ಆಡಳಿತ ಸುಧಾರಣೆಯಲ್ಲಿ ಸಾಕಷ್ಟು ಬದಲಾವಣೆ ಕಂಡಿದೆ ಎಂದು ವಿದ್ಯಾವತಿ ಭಜಂತ್ರಿ ಹೇಳಿದರು.

ನಿತೇಶ್ ಪಾಟೀಲ ಅವರ ಹಲವು ಹೊಸ ವಿಚಾರಗಳು ಕಲಿಯಲು ಎಲ್ಲರಿಗೂ ಅವಕಾಶ ದೊರೆಯಿತು. ಅವರೊಬ್ಬ ಶಿಸ್ತಿನ ಸಿಪಾಯಿ ಎಂದು ಅಧಿಕಾರಿಗಳು ಗುಣಗಾನ ಮಾಡಿದರು.

ವಿಧಾನಸಭೆ ಚುನಾವಣೆ, ಲೋಕಸಭಾ ಚುನಾವಣೆ, ಚಳಿಗಾಲದ ಅಧಿವೇಶನದಲ್ಲಿ ನಿತೇಶ್ ಪಾಟೀಲ ಮಾರ್ಗದರ್ಶನದ ಜೊತೆಗೆ ಅವರೊಂದಿಗಿನ ಬಾಂಧವ್ಯ, ಒಡನಾಟವನ್ನು ಅಧಿಕಾರಿಗಳು ಹಂಚಿಕೊಂಡರು. ಜಿಲ್ಲಾಧಿಕಾರಿಯಾಗಿ ಅವರು ಮಾಡಿದ ಕೆಲಸಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ದಂಪತಿಯನ್ನು ಸನ್ಮಾನಿಸಲಾಯಿತು.

ನೂತನ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ್ ಮೀನಾ, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭ ಭಾಗವಹಿಸಿದ್ದರು.
***

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *