ಶಾಲೆಗಳಲ್ಲಿ ತರ್ಕಾರಿ ಹಂಚುವವರಿಗೆ ಸರ್ಕಾರಿ ಡ್ರೆಸ್ ಕೊಟ್ರು…!!

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರಗಳ ವಿತರಣೆ

ಬೆಳಗಾವಿ : ಜು. 12 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ 2024-25ನೇ ಸಾಲಿನ ಜಿಲ್ಲಾ ಪಂಚಾಯತಿಯ ಮೊದಲ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಬಿಸಿಊಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರಗಳನ್ನು ಲೋಕೋಪಯೋಗಿ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ ರವರು ವಿತರಣೆ ಮಾಡಿದರು.

ಜಿಲ್ಲೆಯಲ್ಲಿ ಸುಮಾರು 200 ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರು ತಾವೇ ಸ್ವತಃ ಸಮವಸ್ತ್ರಗಳನ್ನು ತಯಾರಿಸುತ್ತಿದ್ದು, ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ಆರ್ಥಿಕ ಮಟ್ಟ ಸುಧಾರಣೆಗೆ ಸಹಾಯಕವಾಗಿರುತ್ತದೆ.

ಒಕ್ಕೂಟ/ಸ್ವ-ಸಹಾಯ ಗುಂಪುಗಳ ಮಹಿಳೆಯರು ತಮ್ಮ ಗುಂಪುಗಳಲ್ಲಿ ಅಂದಾಜು ರೂ. 1,41,06,400/- (ಒಂದು ಕೋಟಿ ನಲವತ್ತೊಂದು ಲಕ್ಷ ಆರು ಸಾವಿರದಾ ನಾಲ್ಕುನೂರು ರೂ. ಗಳು) ವ್ಯವಹಾರ ಮಾಡುವ ಮೂಲಕ ತಮ್ಮ ಆರ್ಥಿಕಮಟ್ಟ ಹೆಚ್ಚಿಸಿಕೊಂಡು ಸ್ವಾವಲಂಬಿಯಾಗಿರುತ್ತಾರೆ. ಇದರಿಂದ ಮಹಿಳೆಯರ ಮತ್ತು ಒಕ್ಕೂಟಗಳು ಆರ್ಥಿಕವಾಗಿ ಸಧೃಡವಾಗಿರುವುದನ್ನು ಕಾಣಬಹುದು ಎಂದು ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಸಭೆಗೆ ತಿಳಿಸಿದರು.

ಸಭೆಯಲ್ಲಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ನಗರ ಪೊಲಿಸ್ ಆಯುಕ್ತ ಯಡಾ ಮಾರ್ಟಿನ ಮಾರ್ನಬ್ಯಾಂಗ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ವಿಧಾನ ಸಭಾ, ವಿಧಾನ ಪರಿಷತ ಸದಸ್ಯರುಗಳು, ನಾಮ ನಿರ್ದೆಶನ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *