ಬೆಳಗಾವಿ, ಜು.26(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಮುಂಬರುವ ದಿನಗಳಲ್ಲಿ ಸದರಿ ರಜೆಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ