ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವದನ್ನು ವಿರೋಧಿಸಿ ನಾಳೆ ಸೋಮವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಬೆಳಗಾವಿ ಮಹಾನಗರ ಮತ್ತು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಯಲಿದ್ದು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕಾರ್ಯಕರ್ತರ ಪಡೆ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿ ಕಚೇರಿಯಂದಲೂ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರುಗಳಿಗೆ ನಾಳೆ ನಡೆಯುವ ಹೋರಾಟದಲ್ಲಿ ತಮ್ಮ ತಮ್ಮ ಕ್ಷೇತ್ರದ ಕಾರ್ಯಕರ್ತರ ಜೊತೆ ಭಾಗವಹಿಸುವಂತೆ ಸೂಚಿಸಲಾಗಿದೆ.ನಾಳೆ ಸೋಮವಾರ ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನೆ ಶುರುವಾಗಲಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ